ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ರಾಮನಗರ : ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪಟ್ಟಣ ಪಂಚಾಯಿತಿಯ ಸಿಬ್ಬಂದಿಗಳ ವಿರುದ್ಧ ಬೆಂಗಳೂರಿನ ಮುಖ್ಯ ಕಛೇರಿಗೆ ಹಲವು ದೂರಗಳು ಬಂದ ಹಿನ್ನೆಲೆ,ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪಟ್ಟಣ ಪಂಚಾಯಿತಿಗೆ ಸೇರಿದ ದಾಖಲಾತಿಗಳ  ಪರಿಶೀಲನೆ ನಡೆಸಿದರು. ದಾಳಿ ವೇಳೆಯಲ್ಲಿ  ಜಿಲ್ಲಾ ಲೋಕಾಯುಕ್ತ ಎಸ್ಪಿ ಸ್ನೇಹ, ಸಿಪಿಐ ಅನಂತರಾಮ್, ಸಿಪಿಐ  ಹನುಮಂತ ಕುಮಾರ್, ಸಿಪಿಐ ಸಂದೀಪ್ ಮತ್ತು ಲೋಕಾಯುಕ್ತ ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ