ಉಡುಪಿ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್ಗಳು ಯಾವುದು ಗೊತ್ತಾ?
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಲಂಚ ನೀಡಲು ಒಪ್ಪದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.