ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಮೇಲೆ ಹಲ್ಲೆಗೆ ಮುಂದಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಚಂದ್ರ ಲೇಔಟ್ ನಲ್ಲಿ ತಡರಾತ್ರಿ ದುಷ್ಕರ್ಮಿಗಳು ತಮ್ಮ ಅಟ್ಟಹಾಸ ಮೆರೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಬೈಕ್ ನಲ್ಲಿ ಬಂದ ನಾಲ್ಕು ಪುಂಡರು ವ್ಯಕ್ತಿ ಒಬ್ಬನ ಮೇಲೆ ಲಾಂಗ್ ಬೀಸಲು ಮುಂದಾಗಿದ್ದಾರೆ. ಇದೇ ವೇಳೆ ಕೆಲವು ವ್ಯಕ್ತಿಗಳ ಮೇಲೆ ಸಿನಿಮೀಯಾ ಸ್ಟೈಲಲ್ಲಿ ಶರ್ಟ್ ನಿಂದ ಲಾಂಗ್ ತೆಗೆದು ಬೀಸಿದ್ದು,
ಯುವಕನನ್ನು ಸ್ಥಳೀಯರು ಪಾರು ಮಾಡಿದ್ದಾರೆ. ಇನ್ನೂ ಈ ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳೀಯ ಜನರು ಬೆಚ್ಚಿ ಬಿದ್ದಿದ್ದು, ಈ ಸಂಬಂಧ ಚಂದ್ರ ಲೇಔಟ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಇನ್ನೂ ದೂರಿನ ಅನ್ವಯ & ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಆರೋಪಿಗಳ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
