ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಜನವರಿ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಎಂ.ಎಸ್, ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 35,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.