ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜ.20 ರಂದು ಭಾರತೀಯ ಕಾಲಮಾನ ರಾತ್ರಿ 10:30 ರ ವೇಳೆಗೆ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದು. ಪ್ರಧಾನಿ ನರೇಂದ್ರ ಮೋದಿ ಅಮೇರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟ್ರಂಪ್ ಅವರ 2 ನೇ ಅವಧಿಯ ಆಡಳಿತ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.
“ನಮ್ಮ ಎರಡೂ ದೇಶಗಳಿಗೆ ಪ್ರಯೋಜನವನ್ನು ನೀಡಲು ಮತ್ತು ಜಗತ್ತಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಮತ್ತೊಮ್ಮೆ ನಿಕಟವಾಗಿ, ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿಲ್ಲ. ಆದರೆ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ತಮ್ಮ ವಿಶೇಷ ರಾಯಭಾರಿಯಾಗಿ ಕಾರ್ಯಕ್ರಮಕ್ಕೆ ಕಳುಹಿಸಲಾಗಿತ್ತು.