ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಶ್ರೀರಾಮನನ್ನು ಅಯೋಧ್ಯೆಗೆ ಕರೆತರಲಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದರು. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿಯನ್ನು ಹಾಡಿ ಹೊಗಳಿದರು. ಜನವರಿ 22 ರಂದು ಭಗವಾನ್ ಶ್ರೀರಾಮನು ತನ್ನ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆಸೀನನಾಗಲಿದ್ದಾನೆ.
ಈ ಮೂಲಕ ಸುಮಾರು 500 ವರ್ಷಗಳ ಕಾಯುವಿಕೆ ಕೊನೆಗೊಳ್ಳಲಿದೆ ಎಂದರು. ಭಗವಂತನ ಆಗಮನದ ಮೊದಲು ಅಯೋಧ್ಯೆಯನ್ನು (Ayodhya Ram Mandir) ವಿಶ್ವದ ಅತ್ಯಂತ ಸುಂದರವಾದ ನಗರವನ್ನಾಗಿ ಸ್ಥಾಪಿಸಲು ಪ್ರಧಾನಿ ಸಂಕಲ್ಪ ಮಾಡಿದ್ದರು. ಅದರಂತೆ ಇಂದು ವಿವಿಧ ಯೋಜನೆಗಳನ್ನು ಉದ್ಘಾಟನೆ ಮಾಡಿದ್ದಾರೆ.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಅಯೋಧ್ಯೆಯ ಜನರು ಪ್ರಧಾನಿಯನ್ನು ಸ್ವಾಗತಿಸಿರುವ ರೀತಿ ನಾವೆಲ್ಲರೂ ನವ ಭಾರತದ ಹೊಸ ಅಯೋಧ್ಯೆಯನ್ನು ನೋಡುವಂತೆ ಮಾಡುತ್ತದೆ ಎಂದು ಹೇಳಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಮೋದಿಯವರು ಸಾಕಷ್ಟು ಶ್ರಮವಹಿಸಿದ್ದಾರೆ. ಇಂದು ಅಯೋಧ್ಯೆ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳುತ್ತಾ ಯೋಗಿ ಆದಿತ್ಯನಾಥ್ ಅವರು ಪ್ರಧಾನಿಯವರಿಗೆ ಧನ್ಯವಾದಗಳನ್ನು ಸಮರ್ಪಿಸಿದರು.