ತರಕಾರಿ ತುಂಬಿದ ಲಾರಿ ಪಲ್ಟಿ: 9 ಮಂದಿ ಸಾವು, ಹಲವರು ಗಂಭೀರ!

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 17 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದೆ. ಆಕ್ಸಿಲರೇಟರ್ ಕಟ್ ಆಗಿ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ: ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು ಸಾವು! ತರಕಾರಿ ತುಂಬಿದ್ದ ಹಾವೇರಿಯಿಂದ ಅಂಕೋಲದ ಕಡೆ ಹೊರಟಿತ್ತು, ಲಾರಿಯಲ್ಲಿ 30 ಮಂದಿ ಕುಳಿತಿದ್ದರು. ವೇಗವಾಗಿ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ