ಮಂಡ್ಯ:- ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ.
ನಾಗಮಂಗಲದ ಉದ್ಯಮಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕ್ಷೇತ್ರದ ಮತದಾರರಿಗೆ ಶಾಸಕರ ರವಿ ಗಣಿಗ ಅವರು ಪರಿಚಯ ಮಾಡಿಕೊಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಸ್ಟಾರ್ ಚಂದ್ರು ಅವರನ್ನು ನಿಲ್ಲಿಸುತ್ತಿದ್ದೇವೆ. ಆಶೀರ್ವಾದ ಮಾಡುವಂತೆ ಮನವಿ ಮಾಡುತ್ತಿದ್ದಾರೆ.