ಬೆಂಗಳೂರು: ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಸೋಲದೇವನಹಳ್ಳಿಯಲ್ಲಿ ನಡೆದಿದೆ. 25 ವರ್ಷದ ಲಿಖಿತಾ ಮೃತ ದುರ್ದೈವಿಯಾಗಿದ್ದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
BIGG NEWS: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ?: ರಾಜ್ಯ ಉಸ್ತುವಾರಿ ಬಳಿ ಅಸಮಾಧಾನ!
ಬಿಹಾರಿ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದಳು ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗಾಗಿ ಲವ್ ಬ್ರೇಕ್ ಅಪ್ ಆಗಿತ್ತು. ಇದರಿಂದ ಲಿಖಿತಾ ಮನನೊಂದಿದ್ದಳು.ಸಾಯುವ ಮಾತಗಳನ್ನಾಡುತ್ತಿದ್ದಳು. ವಾರದ ಹಿಂದಷ್ಟೇ ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಬಂದಿದ್ದಳು.
ಒಂದು ವಾರದಿಂದ ಸೋಲದೇವನಹಳ್ಳಿಯ ಸಹೋದರಿಯ ನಿವಾಸದಲ್ಲಿ ವಾಸವಿದ್ದಳು ನಿನ್ನೆ ಮನೆಯಿಂದ ಹೊರಗೆ ಹೋಗಿದ್ದ ಲಿಖಿತಾ ವಾಪಸ್ಸು ಮನೆಗೆ ಬಂದಿರಲಿಲ್ಲ ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಪೊಲೀಸರ ತನಿಖೆಯಿಂದ ಮಾಹಿತಿ ಹೊರ ಬಂದಿದ್ದು ಇದೀಗ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನಿಖಿತ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ