ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಎಂಗೇಜ್ ಆಗಲಿದ್ದಾರೆ ಎನ್ನುವ ಮಾಹಿತಿಯ ಬೆನ್ನಲ್ಲೇ ಈ ಜೋಡಿ ವಿಯೆಟ್ನಾಂನಲ್ಲಿ (Vietnam) ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಅವರ ನಿಶ್ಚಿತಾರ್ಥ ಸುದ್ದಿಗೆ ಮತ್ತಷ್ಟು ಬಲ ಬಂದಿದೆ. ವಿಯೆಟ್ನಾಂನಲ್ಲಿ ಇಬ್ಬರೂ ಮಸ್ತ್ ಮಜಾ ಮಾಡ್ತಿರೋ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ವಿಜಯ್ ದೇವರಕೊಂಡ (Vijay Devarakonda) ಹೆಸರು ತಳುಕು ಹಾಕಿಕೊಂಡಿರೋದು ಇದೇ ಮೊದಲ ಬಾರಿ ಏನಲ್ಲ. ಆದರೆ, ಈ ಬಾರಿಯಂತೂ ಅವರು ಗ್ಯಾರಂಟಿ ಜೊತೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ಎಂಗೇಜ್ಮೆಂಟ್ (Engagement) ಮಾಡಿಕೊಳ್ತಿದ್ದಾರೆ ಎನ್ನುವುದು ತಾಜಾ ಸುದ್ದಿ.
‘ಗೀತ ಗೋವಿಂದಂ’ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ.