ಬೆಂಗಳೂರು: ಈ ಬಾರಿ ಆರ್ಸಿಬಿ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್ ಗೆದ್ದಿದೆ. ಇದರ ಬೆನ್ನಲ್ಲೇ ದರ್ಶನ್ ಕೆಲ ಫ್ಯಾನ್ಸ್ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ದೂರುತ್ತಿದ್ದಾರೆ.
ಬಿಜೆಪಿಗೆ ಸೇರ್ಪಡೆ ಮುನ್ನ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ!
‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿದೆ.ಆರ್ಸಿಬಿ ಸೋಲುವುದಕ್ಕೂ,ಅಶ್ವಿನಿ ಪುನೀತ್ ರಾಜ್ಕುಮಾರ್ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್ ಆಕ್ರೋಶ ಹೊರಹಾಕುತ್ತಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಆರ್ಸಿಬಿ ಅನ್ಬಾಕ್ಸಿಂಗ್ ಇವೆಂಟ್ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ.
ಈ ಟ್ವೀಟ್ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. ಈಗಾಗಲೇ ಟ್ವಿಟರ್ನಲ್ಲಿ ಈ ಬಗೆಗಿನ ಸ್ಕ್ರೀನ್ ಶಾಟ್ಗಳು ವೈರಲ್ ಆಗುತ್ತಿದೆ.