ಬೆಂಗಳೂರು:- ಮಳೆ ಪ್ರಮಾಣ ಕಡಿಮೆ ಆಗುತ್ತಿದ್ದಂತೆ ಕರ್ನಾಟಕದಾದ್ಯಂತ ಮೈಕೊರೆವ ಚಳಿ ಮತ್ತೆ ಶುರುವಾಗಿದೆ.
Ranji Trophy: ರಣಜಿ ಟ್ರೋಫಿಯಲ್ಲಿ ಆಡುವ ಬಗ್ಗೆ ಮಹತ್ವ ಅಪ್ ಡೇಟ್ ಕೊಟ್ಟ ವಿರಾಟ್ ಕೊಹ್ಲಿ!
ಮಳೆ ಕಡಿಮೆಯಾದ ಬಳಿಕ ಚಳಿಯ ಪ್ರಮಾಣ ಮತ್ತೆ ಹೆಚ್ಚಾಗಿದೆ. ಶೀತಗಾಳಿ ಬೀಸುತ್ತಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚಳಿ ಇರಲಿದ್ದು, ಒಣಹವೆ ಮುಂದುವರೆಯಲಿದೆ. ಮಂಗಳೂರು ಏರ್ಪೋರ್ಟ್ನಲ್ಲಿ ಮಳೆಯಾಗಿದೆ.
ಬೀದರ್ನಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 21.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 21.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 21.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ
ಹೊನ್ನಾವರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.