ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಇಂದು ಡೆಲ್ಲಿ ಕಾಪಿಟಲ್ಸ್ ಸೆಣಸಾಡಲಿದೆ. ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಹೆಸರಲ್ಲಿದ್ದ ಸಿಕ್ಸರ್ಗಳ ದಾಖಲೆ ಮುರಿದ RCB ನಾಯಕ!
ಇಂದು ಐಪಿಎಲ್ 2024 ರ 26 ನೇ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಸೀಸನ್ನಲ್ಲಿ ಒಂದೆಡೆ ಲಕ್ನೋ ತಂಡ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವಿಗಾಗಿ ಹಾತೊರೆಯುತ್ತಿದೆ. ಈ ಸೀಸನ್ನಲ್ಲಿ ಇಲ್ಲಿಯವರೆಗೆ ಲಕ್ನೋ 4 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3 ಪಂದ್ಯಗಳನ್ನು ಗೆದ್ದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ 5 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 4 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ.