ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಅಬ್ಬರಿಸಿದ ಮಳೆ…!
ಇಂದು, ಐಪಿಎಲ್ 2024 ರ 64 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಎದುರಿಸುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಡೆಲ್ಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಒಂದು ವೇಳೆ ತಂಡ ಸೋತರೆ ಪ್ಲೇ ಆಫ್ ರೇಸ್ನಿಂದ ಹೊರಗುಳಿಯಲಿದೆ. ಡೆಲ್ಲಿ ಮತ್ತು ಲಕ್ನೋ ಎರಡೂ ತಲಾ 12 ಅಂಕ ಹೊಂದಿವೆ. ಇದು ಡೆಲ್ಲಿಗೆ 14ನೇ ಪಂದ್ಯವಾದರೆ, ಲಕ್ನೋಗೆ 13ನೇ ಪಂದ್ಯ.
![](https://ainlivenews.com/wp-content/uploads/2024/01/Ad-Banner-copy-scaled.jpg)