ಬೆಂಗಳೂರು:– ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ ಎಂದು ಬಿಜೆಪಿ ಸಾಬೀತು ಪಡಿಸಿಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳವಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ ಎಂಬುದನ್ನು ಅವರು ಸಾಬೀತುಪಡಿಸಲಿ ಎಂದರು.
ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡುವ ಉದ್ದೇಶದಿಂದ ಆರೋಪಿಸುತ್ತಿದ್ದಾರೆ. ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದೆ. ಇದರಲ್ಲಿ 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದ್ದು, ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು ಎಂದರು.
ಡಿಸೆಂಬರ್ ಅಂತ್ಯದೊಳಗೆ ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಹಣ ಒದಗಿಸಲು ಸೂಚನೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 4.34 ಕೋಟಿ ಜನರಿಗೆ ಪ್ರತಿ ಮಾಹೆ 170 ರೂ. ನೀಡಲಾಗುತ್ತಿದೆ. ಇದುವರೆಗೂ 1.50 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳು ಎನ್ನುವುದಾರೆ ಬಿಜೆಪಿಯವರು ಸಾಬೀತುಪಡಿಸಲಿ. ಈಗಾಗಲೇ ನಾನು ಗೃಹಲಕ್ಷ್ಮಿ ಯೋಜನೆಯಿಂದ ಹಣ ಪಡೆಯದೇ ಇರುವ ಮಹಿಳೆಯರನ್ನು ಅಂಗನವಾಡಿ ಕಾರ್ಯಕರ್ತೆಯರು ಬ್ಯಾಂಕ್ಗಳಿಗೆ ಕರೆದುಕೊಂಡಿ ಹೋಗಿ ಆಧಾರ್ ನಂಬರ್ ಅನ್ನು ಬ್ಯಾಂಕ್ಗೆ ಲಿಂಕ್ ಮಾಡಿಸಲು ಸೂಚನೆ ಕೊಟ್ಟಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.