ತುಮಕೂರು:- ಮಾಧುಸ್ವಾಮಿ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮಾಧುಸ್ವಾಮಿ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ, ಸೋಮಣ್ಣ ಪರ ಕೆಲಸ ಮಾಡೋದು ಮಾಧುಸ್ವಾಮಿಗೆ ಬಿಟ್ಟಿರೋದು, ಲೋಕಸಭಾ ಚುನಾವಣೆಯ ಪ್ರಚಾರದ ಬಗ್ಗೆ ಚರ್ಚೆಯಾಗಿಲ್ಲ ಎಂದಿದ್ದಾರೆ.
ಇನ್ನೂ ಲೋಕಸಭಾ ಚುನಾವಣೆಗೆ ತುಮಕೂರಿನಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಮಾಧುಸ್ವಾಮಿಗೆ ನೀಡದೇ ವಿ.ಸೋಮಣ್ಣ ಅವರಿಗೆ ಟಿಕೆಟ್ ನೀಡಿರುವುದರಿಂದ ಮಾಧುಸ್ವಾಮಿ, ಸೋಮಣ್ಣ ಮೇಲೆ ಮುನಿಸಿಕೊಂಡಿದ್ದಾರೆ. ಈ ಹಿನ್ನಲೆ ಇದನ್ನು ಇವರಿಬ್ಬರ ನಡುವಿನ ಅಸಮಧಾನ ತಣ್ಣಗಾಗಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂದು ಮಾತುಕತೆ ನಡೆಸಿದ್ದಾರೆ