ಹಾನಗಲ್:- ಹೌದು ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳು ಬಹುಶಃ ಮತ್ತು ಭಾಗಶಃ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಗೆ ಬರುವ ಕತ್ರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆ ದುಸ್ಥಿತಿ ನೋಡಿದ್ರೆ ಎಷ್ಟು ಕಾರ್ಯ ಪ್ರವೃತ್ತ ವಾಗಿದೆ ಎಂಬುದು ಸ್ಪಷ್ಟವಾಗುತ್ತದೆ.
ಹೌದು ಅದ್ಯಾಕೋ ಏನೋ ಗೊತ್ತಿಲ್ಲಾ ಈ ಒಟ್ಟು 15 ಶಾಲಾ ವಿದ್ಯಾರ್ಥಿಗಳು ಇರುವ ಕತ್ರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆಗೆ ಎರಡು ಸಮಸ್ಯೆಗಳು ಜ್ವಲಂತ ಸಮಸ್ಯೆಗಳಾಗಿ ಮಾರ್ಪಟ್ಟಿವೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕಾಮಗಾರಿ ಇರೋದ್ರಿಂದ ಕಳೆದ 1 ವರ್ಷದಿಂದ ಬರೀ ಧೂಳಿನಿಂದ ಮುಚ್ಚಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿ, ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರಿವೆ, ಇನ್ನೊಂದು ಕಡೆ ತುಂಬಾ ಶಿಥಿಲಗೊಂಡ ಕಟ್ಟಡದಲ್ಲೇ ಮಕ್ಕಳು ಅಭ್ಯಾಸ ಮಾಡುತ್ತಿರುವುದರಿಂದ ದಿನ ನಿತ್ಯ ಜೀವ ಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ಬಂದೊದಗಿದೆ.
ಇನ್ನೂ ಶಾಲಾ ಆವರಣದ ತುಂಬಾ ಬರೀ ಮಣ್ಣಿನ ಧೂಳೇ ಇರುವ ಕಾರಣ ಮಕ್ಕಳಿಗೆ ಉಸಿರಾಟದ ಸಮಸ್ಯೆಯು ಸಹ ಎದುರಾಗುವ ಲಕ್ಷಣಗಳು ಸಹ ಇವೆ. ಇನ್ನೂ ಶಾಲಾ ಕೊಠಡಿ ನಿರ್ಮಾಣ ಮಾಡುವಂತೆ ಇಲ್ಲಿನ ಶಿಕ್ಷಕರು ಪದೇ ಪದೇ ಬಿ.ಇ. ಓ ಹಾಗೂ ಮೇಲಾಧಿಕಾರಿಗಳಿಗೆ ಸತತ 4 ವರ್ಷಗಳಿಂದ ಗಮನಕ್ಕೆ ತೆಗೆದುಕೊಂಡು ಬಂದ್ರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಆದ್ದರಿಂದ ಇಂದು ಮಾಧ್ಯಮ ಪ್ರತಿನಿಧಿ ಆಕಸ್ಮಿಕವಾಗಿ ಭೇಟಿಕೊಟ್ಟು ಇಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಿ ಹಾವೇರಿ ಡಿ.ಡಿ.ಪಿ.ಐ ಹಾಗೂ ಹಾನಗಲ್ ಬಿ.ಇ. ಓ ಅವರ ಗಮನಕ್ಕೆ ತೆಗೆದುಕೊಂಡು ಬಂದು, ಸ್ಥಳೀಯ ಸಮ್ಮಸಗಿ ಗ್ರಾಮ ಪಂಚಾಯಿತಿ ಪಿ.ಡಿ.ಓ ಅವರನ್ನು ಶಾಲೆಗೆ ಕರೆಯಿಸಿ, ಅವರ ಅಭಿಪ್ರಾಯ ಸಂಗ್ರಹ ಮಾಡಿ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಸಮಗ್ರ ವರದಿ ತಯಾರಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ.
ಇನ್ನಾದ್ರೂ ಈ ಶಾಲೆಯು ಧೂಳಿನಿಂದ ಮುಕ್ತವಾಗಿ, ಅಭಿವೃದ್ಧಿ ಪಥದತ್ತ ಮುನ್ನಡೆಯುವುದೇ ಎಂಬುದನ್ನು ಕಾದುನೋಡಬೇಕಿದೆ.