ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ವಿತರಣೆ ಮಾಡಲು ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅದರಂತೆ ಇಂದು ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅರಬಿಂದೋ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಲಸಿಕೆ ವಿತರಣೆಗೆ ಕ್ಷೇತ್ರದ ಶಾಸಕ ಹಾಗೂ ಸಚಿವ ಕೆ ಗೋಪಾಲಯ್ಯ ಚಾಲನೆ ನೀಡಿದ್ದರು. ಬಳಿಕ ಮಾತನಾಡಿದ ಅವರು, ಕೋವಿಡ್ ಲಸಿಕೆ ನೀಡಿಕೆಯಲ್ಲಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದು, ಈ ಮೂಲಕ ಲಸಿಕೆ ನೀಡಿಕೆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದ್ದರು. ಇನ್ನೂ ಈಗಾಗಲೇ ಎರಡು ಅಲೆಗಳನ್ನು ಎಲ್ಲರೂ ಸೇರಿ ಎದುರಿಸಿದ್ದೇವೆ. ಇದೀಗ ಮೂರನೆ ಅಲೆ ಬಂದಿದ್ದು, ಇದನ್ನೂ ಕೂಡ ಮೆಟ್ಟಿ ನಿಲ್ಲಬೇಕಿದೆ. ಇದಕ್ಕಾಗಿ ಲಸಿಕೆಯನ್ನು ಎಲ್ಲರೂ ಕಡ್ಡಾಯವಾಗಿ ಪಡೆಯಲೇಬೇಕು ಎಂದು ಸಚಿವ ಕೆ ಗೋಪಾಲಯ್ಯ ಸಲಹೆ ನೀಡಿದ್ದಾರೆ.

