ಹುಬ್ಬಳ್ಳಿ: ಇಂದು ತಾಲೂಕು ಆಡಳಿತ ಸೌಧದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಶಾಸಕರಾದ ಎಮ್.ಆರ್. ಪಾಟೀಲ ಹಾಗೂ ಎನ್.ಎಚ್. ಕೋನರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನವಗ್ರಹ ತೀರ್ಥಂಕರರ ಮಹಾಮಸ್ತಕಾಭಿಕ್ಷೇಕ ಹಾಗೂ 405 ಅಡಿ ಎತ್ತರದ ಸುಮೇರು ಪರ್ವತದ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಿವಾನಂದ ಭೂಮಣ್ಣವರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾ ಅಧಿಕಾರಿಗಳಾದ ದೀಪಕ ಮಡಿವಾಳರ, ಹುಬ್ಬಳ್ಳಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ,
ರೈತರ ಗಮನಕ್ಕೆ.. ಈ ಯೋಜನೆಯಲ್ಲಿ ಸೋಲಾರ್ ಪಂಪ್ ಸೆಟ್ʼಗೆ ಸಿಗಲಿದೆ 1.5 ಲಕ್ಷ ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ
ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾದ ಸಿ.ವಿ.ಕರವೀರಮಠ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಗದೀಶ ಪಾಟೀಲ್, ಡಾ.ರಾಮಚಂದ್ರ ಹೊಸಮನಿ, ಅಕ್ಷರ ದಾಸೋಹದ ಸಂಗಮೇಶ ಬಂಗಾರಿಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.