ಮಹಾರಾಷ್ಟ್ರ ಚುನಾವಣೆ ಹಿನ್ನೆಲೆ, ಮಹಾ ವಿಕಾಸ್ ಅಘಾಡಿ ಜತೆ ಕಾಂಗ್ರೆಸ್ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಬೆಂಗಳೂರಿನ ಈ ಏರಿಯಾದ ಠಾಣೆಗಳಿಗೆ ಇನ್ಸ್ಪೆಕ್ಟರ್ಗಳೇ ಇಲ್ಲ! ಗೃಹ ಸಚಿವರೇ ಕ್ರಮ ಯಾವಾಗ!?
ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂದು ನಾವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದೇವೆ.
ಮಹಾರಾಷ್ಟ್ರ ಚುನಾವಣೆ ದೇಶದ ಪಾಲಿಗೆ ಅತ್ಯಂತ ಮಹತ್ವದ ಚುನಾವಣೆ. ಈ ಚುನಾವಣೆ ದೇಶದ ಭವಿಷ್ಯವನ್ನೇ ಬದಲಿಸುವ ಚುನಾವಣೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ತಂದರೆ ಮಾತ್ರ ಇಲ್ಲಿ ಸ್ಥಿರ, ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಮಹಾವಿಕಾಸ್ ಅಘಾಡಿ ಅದರ ಪ್ರಣಾಳಿಕೆಯನ್ನು ‘ಮಹಾರಾಷ್ಟ್ರ ನಾಮ’ ಎಂದು ಹೆಸರಿಸಿದ್ದಾರೆ. ಪ್ರಣಾಳಿಕೆ ಬಿಡುಗಡೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಶಿವಸೇನೆ ಯುಬಿಟಿ ನಾಯಕ ಸಂಜಯ್ ರಾವತ್, ಎನ್ಸಿಪಿ ಎಸ್ಪಿ ನಾಯಕಿ ಸುಪ್ರಿಯಾ ಸುಳೆ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಒಕ್ಕೂಟವು ಐದು ಖಾತರಿಗಳನ್ನು ನೀಡುವುದಾಗಿ ಭರವಸೆ ನೀಡಿರುವುದು ಗಮನಾರ್ಹವಾಗಿದೆ. ಇದರ ಪ್ರಕಾರ, ಮೊದಲ ಗ್ಯಾರಂಟಿ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಸೇವೆಯ ಭರವಸೆಯನ್ನು ಒಳಗೊಂಡಿದೆ. ಎರಡನೆಯ ಖಾತರಿ ಸಮಾನತೆ.
ಇದರ ಅಡಿಯಲ್ಲಿ ಜಾತಿ ಗಣತಿ ನಡೆಸಲಾಗುವುದು ಮತ್ತು 50 ಪ್ರತಿಶತ ಮೀಸಲಾತಿಯ ಮಿತಿಯನ್ನು ತೆಗೆದುಹಾಕಲಾಗುತ್ತದೆ. ಮೂರನೇ ಗ್ಯಾರಂಟಿ ಕುಟುಂಬ ರಕ್ಷಾ ಯೋಜನೆಯಾಗಿದೆ, ಇದು 25 ಲಕ್ಷದವರೆಗೆ ಆರೋಗ್ಯ ವಿಮೆ ಮತ್ತು ಉಚಿತ ಔಷಧಿಗಳನ್ನು ನೀಡುತ್ತದೆ. ಕೃಷಿ ಸಮೃದ್ಧಿ ಯೋಜನೆಯಡಿ ರೈತರು ಸಕಾಲದಲ್ಲಿ ಸಾಲ ಮರುಪಾವತಿಸಿದರೆ 3 ಲಕ್ಷ ರೂ.ವರೆಗಿನ ಸಾಲ ಮನ್ನಾ ಹಾಗೂ 50 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದಾರೆ. ಯುವಕರಿಗೆ ನೀಡಿದ ಭರವಸೆಯಲ್ಲಿ ನಿರುದ್ಯೋಗಿಗಳಿಗೆ ಮಾಸಿಕ 4000 ರೂ. ನೀಡಲಾಗುವುದು.