ಕೋಲಾರ: ಟೆಂಪೊ ಒಂದು ದೇಗುಲಕ್ಕೆ ಡಿಕ್ಕಿ ಹೊಡೆದಿದ್ದು, ದೇಗುಲದಲ್ಲಿದ್ದ ಮೂವರು ಮಹಿಳೆಯರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಬಳಿಯ ಹಸಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.. ಮಾಸ್ತಿ ಗ್ರಾಮದ ಚಂದ್ರಶೇಖರ್(38) ಮೃತ ದುರ್ದೈವಿಯಾಗಿದ್ದು,
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಬಳಿಯ ಹಸಾಂಡಹಳ್ಳಿ ಗ್ರಾಮದಲ್ಲಿರುವ ಮುನೇಶ್ವರಸ್ವಾಮಿ ದೇಗುಲದಲ್ಲಿ ಈ ಘಟನೆ ನಡೆದಿದೆ. ಮಹೇಂದ್ರ ಟೆಂಪೊ ಒಂದು ದೇಗುಲಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ದೇಗುಲದಲ್ಲಿ ಪೂಜೆ ಮಾಡ್ತಿದ್ದ ಮೂವರು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಇನ್ನೂ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.