ಮಾಂಸಾಹಾರ ಪ್ರಿಯರಿಗೆ ಸವಿಯಲು ಬಗೆ ಬಗೆಯ ರುಚಿಕರ ಖಾದ್ಯಗಳಿವೆ. ನಾನ್ವೆಜ್ ಅಡುಗೆಯಲ್ಲಿ ಸೂಪ್ ಕೂಡ ವಿಶಿಷ್ಟ ಖಾದ್ಯ. ಇದನ್ನು ಮನೆಯಲ್ಲೇ ಮಾಡಿ ಸವಿಯುವುದು ಇನ್ನೂ ಚೆನ್ನಾಗಿರುತ್ತೆ. ಸೂಪ್ ಮಾಡುವುದು ಸುಲಭ. ಅದಕ್ಕೆ ಹೆಚ್ಚಿನ ಸಮಯ, ಪರಿಶ್ರಮವೂ ಅಗತ್ಯವಿಲ್ಲ. ನಾನ್ವೆಜ್ ಅಡುಗೆಯಲ್ಲಿ ಹೊಸ ಪ್ರಯತ್ನ ಮಾಡುವವರಿಗೂ ಇದು ಕಷ್ಟವೆನಿಸುವುದಿಲ್ಲ. ಈ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಸೂಪ್ ಮಾಡಿ, ಅದರ ರುಚಿ ಸವಿದು ಎಂಜಾಯ್ ಮಾಡಿ.
ಬೇಕಾಗುವ ಸಾಮಗ್ರಿಗಳು:
* ಬೆಣ್ಣೆ – ಅರ್ಧ ಕಪ್
* ಈರುಳ್ಳಿ-1
* ಬೆಳ್ಳುಳ್ಳಿ-4
* ಹಸಿಮೆಣಸು -4
* ಕ್ಯಾರೆಟ್ -ಅರ್ಧ ಕಪ್
* ಕೊತ್ತಂಬರಿ ಸೊಪ್ಪು -ಸ್ವಲ್ಪ
* ಬೇಯಿಸಿದ ಚಿಕನ್- 2 ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಕಾಳುಮೆಣಸಿನ ಪುಡಿ- 2 ಚಮಚ
ಮಾಡುವ ವಿಧಾನ:
* ದಪ್ಪ ತಳದ ಪಾತ್ರೆಯೊಂದಕ್ಕೆ ಬೆಣ್ಣೆ ಹಾಕಿ ಬಿಸಿ ಮಾಡಿ. ನಂತರ ಈರುಳ್ಳಿ, ಬೆಳ್ಳುಳ್ಳಿ, ಹಸಿಮೆಣಸು, ಕ್ಯಾರೆಟ್ ಹಾಗೂ ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ.
* ನಂತರ ಬೇಯಿಸಿದ ಚಿಕನ್ ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕಾಳುಮೆಣಸು ಸೇರಿಸಿ ಮತ್ತೆ ಚೆನ್ನಾಗಿ ಕುದಿಸಿ.
* ಇದಕ್ಕೆ ಹಸಿಮೆಣಸು, ಕೊತ್ತಂಬರಿ ಸೊಪ್ಪು ಹಾಕಿದರೆ ಸ್ಪೆಷಲ್ ಚಿಕನ್ ಸೂಪ್ ಸಿದ್ಧವಾಗುತ್ತದೆ.