ಕೋಲಾರ :- ಮಕ್ಕಳಿಂದ ಮಲಗುಂಡಿ ಸ್ವಚ್ಚತೆ ಕೇಸ್ ಗೆ ಸಂಬಂಧಿಸಿದಂತೆ ಇದು ಬಹಳ ಕ್ರೂರ ಕೃತ್ಯವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ್ದು ಕ್ರೂರ ಕೃತ್ಯ. ಅಪ್ಪಿತಪ್ಪಿಯೂ ಇಂಥ ಕೃತ್ಯ ಸಹಿಸುವುದಿಲ್ಲ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಎರಡು ದಿನಗಳಲ್ಲಿ ಇನ್ನುಳಿದ ಇಬ್ಬರನ್ನು ಬಂಧಿಸಬೇಕು’ ಎಂದು ತಾಕೀತು ಮಾಡಿದರು.
ಈ ಘಟನೆ ಇಡೀ ರಾಜ್ಯಕ್ಕೆ ಒಂದು ಪಾಠ. ಯಾವುದೇ ಕಾರಣಕ್ಕೂ ಮರುಕಳಿಸಬಾರದು. ವಸತಿ ಶಾಲೆಗಳ ಒಳಗೆ ಪೋಷಕರು ಪ್ರವೇಶಿಸಲು ಅವಕಾಶ ನೀಡಬೇಕು. ಇದರಿಂದ ಪೋಷಕರಿಗೆ ವಸತಿ ಶಾಲೆಗಳ ಗುಣಮಟ್ಟ ಗೊತ್ತಾಗುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
‘ಸ್ಮಶಾನ ಮತ್ತು ಖಬರಸ್ತಾನಕ್ಕೆ ಅಗತ್ಯ ಜಾಗ ಒದಗಿಸಬೇಕು. ಸರ್ಕಾರಿ ಸ್ಥಳ ಇಲ್ಲದಿದ್ದರೆ ಖರೀದಿಸಿ ಕೊಡಬೇಕು. ದಲಿತರು ಸೇರಿದಂತೆ ಯಾವುದೇ ಸಮುದಾಯ, ಧರ್ಮದವರಿಗೆ ಶವ ಸಂಸ್ಕಾರಕ್ಕೆ ತೊಂದರೆ ಆಗಕೂಡದು’ ಎಂದರು.