ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಪಾತ್ರಕ್ಕೆ ಮಸಾಲೆ ಹಾಕಿ ನಗುವನ್ನು ಹಂಚಿದ ಸಿಹಿಕಹಿ ಚಂದ್ರು (Shihkahi Chandru) ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಬೊಂಬಾಟ್ ಭೋಜನ” (Bombat Bhojana) ಕಾರ್ಯಕ್ರಮದಲ್ಲಿ ಪಾತ್ರೆಗೆ ಮಸಾಲೆ ಹಾಕಿ ಭೋಜನ ಪ್ರಿಯರಿಗೆ ರಸದೌತಣವನ್ನು ಬಡಿಸುತ್ತ ಅಮೋಘ 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.
ಬೊಂಬಾಟ್ ಭೋಜನದ ಮೂರನೇ ಆವೃತ್ತಿ ಇದಾಗಿದ್ದು, ಈ ಆವೃತ್ತಿಯು ಸಾಕಷ್ಟು ವೈಶಿಷ್ಟ್ಯತೆಗಳಿಂದ ತುಂಬಿದೆ. ನಮ್ಮೂರ ಊಟ, ಮನೆ ಊಟ, ಸವಿ ಊಟ, ಕೈ ರುಚಿ, ಅಂಗೈಯಲ್ಲಿ ಆರೋಗ್ಯ, ಅಂದ ಚೆಂದ ಹಾಗೂ ಅತಿಥಿ ದೇವೋಭವ ಎಂಬ ವಿಭಾಗಗಳನ್ನು ಹೊಂದಿದ್ದು ಮನೆ ಮಂದಿಯ ಮನಗೆದ್ದು ಮನೆ ಮಾತಾಗಿದೆ.
ಹೀಗೆ ಹತ್ತು ಹಲವು ವಿಶೇಷತೆಗಳಿಂದ ಕೂಡಿರುವ “ಬೊಂಬಾಟ್ ಭೋಜನ ಶೋ” 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಸಾವಿರದ ಸಂಚಿಕೆಯಲ್ಲಿ ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ (Malashree) ಭಾಗಿಯಾಗಲಿದ್ದಾರೆ. ತಪ್ಪದೇ ವೀಕ್ಷಿಸಿ ಇಂದು ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ