ಕೇರಳ: ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಮಲಯಾಳಂ ಸಾಹಿತಿ, ಎಂಟಿ ವಾಸುದೇವನ್ ನಾಯರ್ (91) ಅವರು ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದವಾಸುದೇವನ್ ನಾಯರ್ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಕೋಯಿಕ್ಕೋಡ್ ಬೇಬಿ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Toe Ring: ವಿವಾಹಿತ ಮಹಿಳೆಯರೇ ಗಮನಿಸಿ.. ಯಾವುದೇ ಕಾರಣಕ್ಕೂ ಈ ರೀತಿಯ ಕಾಲುಂಗುರ ಹಾಕಬಾರದು!
ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ನಿಧನ ಹೊಂದಿದರು. ಮೃತರು ಪತ್ನಿ ಕಲಾಮಂಡಲಂ ಸರಸ್ವತಿ ಹಾಗೂ ಮಗಳಾದ ಅಶ್ವತಿಯನ್ನು ಅಗಲಿದ್ದಾರೆ. ಎಂಟಿ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.