ನವದೆಹಲಿ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ. ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಮಾಲ್ಡೀವ್ಸ್ನ ಸಚಿವ ಮೂಸಾ ಜಮೀರ್ ಅವರಿಗೆ ಆತ್ಮೀಯ ಸ್ವಾಗತ. ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಚರ್ಚೆ ನಡೆಸುವುದು ಮತ್ತು ಉಭಯ ದೇಶಗಳ ಉತ್ತಮ ಬಾಂಧವ್ಯ ಕಾಪಾಡಲು ಇದು ಸೌಹಾರ್ಧ ಭೇಟಿಯಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಎಕ್ಸ್ನಲ್ಲಿ ಪೋಸ್ಟ್ ಹಾಕಿದೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಭಾರತಕ್ಕೆ ನನ್ನ ಮೊದಲ ದ್ವಿಪಕ್ಷೀಯ ಅಧಿಕೃತ ಭೇಟಿಯ ಸಂದರ್ಭದಲ್ಲಿ ನವದೆಹಲಿಗೆ ಆಗಮಿಸಿದ್ದೇನೆ. ಉತ್ಪಾದಕ ಚರ್ಚೆಗಳು, ಸಂಬಂಧಗಳನ್ನು ಬಲಪಡಿಸುವುದು ಮತ್ತು ಭಾರತದ ರೋಮಾಂಚಕ ಸಂಸ್ಕೃತಿಯನ್ನು ಅನುಭವಿಸಲು ಎದುರು ನೋಡುತ್ತಿದ್ದೇನೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಮಾಲ್ಡೀವಿಯನ್ ಸಚಿವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಚರ್ಚಿಸಲು ಇಂದು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದೆ.