ದಾವಣಗೆರೆ:- ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಿಸಿರುವುದು ಕೂಸು ಹುಟ್ಟುವ ಮುನ್ನವೇ ಹೆಸರಿಟ್ಟಂತಾಗಿದೆ ಎಂದರು.
ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಮಾಡಬೇಕು. ಚುನಾವಣೆ ಮುಗಿದ ಬಳಿಕ ಆಯ್ಕೆಯಾಗಲಿ ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ.
ಹಾಗಾಗಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಅಭ್ಯರ್ಥಿ ಆಯ್ಕೆ ಬಗ್ಗೆ ಯೋಚನೆ ಮಾಡಬೇಕು. ಆದರೂ, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವುದನ್ನು ಸ್ವಾಗತಿಸುವೆ ಎಂದರು.