ಸುವರ್ಣಸೌಧದಲ್ಲಿ ಬಾಪೂ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಿರ್ಮಾಣಗೊಂಡಿರುವ ಮಹಾತ್ಮಾ ಗಾಂಧೀಜಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಯಿತು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಲೋಕಾರ್ಪಣೆಗೊಳಿಸಿದರು. ಚರಕವನ್ನು ತಿರುಗಿಸುವ ಮೂಲಕ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರತಿಮೆ ಅನಾವರಣಗೊಳ್ಳುತ್ತಿದ್ದಂತೆ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಯಿತು. ಇದೇ ವೇಳೆ ಗದಗನ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ಯ ವಿಶ್ವ ವಿದ್ಯಾಲಯಕ್ಕೆ ಮರು ನಾಮಕರಣ ಮಾಡಲಾಗಿದ್ದು, ಮಹಾತ್ಮಾ ಗಾಂಧೀಜಿ ಗ್ರಾಮೀಣ ಅಭಿವೃದ್ಧಿ ವಿಶ್ವವಿದ್ಯಾಲಯವೆಂದು ನಾಮಕರಣ ಮಾಡಲಾಗಿದ್ದು, ವಿಶ್ವವಿದ್ಯಾಲಯದ ಲಾಂಚ ಬಿಡುಗಡೆ ಮಾಡಲಾಯಿತು. ತುಮಕೂರಿನ ರೈಲ್ವೇ ನಿಲ್ದಾಣಕ್ಕೆ … Continue reading ಸುವರ್ಣಸೌಧದಲ್ಲಿ ಬಾಪೂ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಮಲ್ಲಿಕಾರ್ಜುನ ಖರ್ಗೆ