Ain Live News
    Facebook Twitter Instagram YouTube
    ಕನ್ನಡ English తెలుగు
    Tuesday, May 30
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Salman Khan: ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಓರ್ವನ ಬಂಧನ

    Author AINBy Author AINMarch 27, 2023
    ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಓರ್ವನ ಬಂಧನ
    Share
    Facebook Twitter LinkedIn Pinterest Email

    ಬಾಲಿವುಡ್ ಸೂಪರ್ ಸ್ಟಾರ್ ನಟ ಈಗಾಗಲೇ ಕೆಲವು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಕಳೆದ ಕೆಲವು ದಿನಗಳ ಹಿಂದೆಯಷ್ಟೆ ವ್ಯಕ್ತಿಯೋರ್ವ ಇ-ಮೇಲ್ ಮೂಲಕ ಸಲ್ಲು ಬಾಯ್ ಗೆ ಬೆದರಿಕೆ ಸಂದೇಶ ಕಳಿಸಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ಸಲ್ಮಾನ್ ಖಾನ್​ರ ಆಪ್ತ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್​ಗೆ ಈ ಬೆದರಿಕೆ ಇ-ಮೇಲ್ ಬಂದಿದೆ.  ಈ ಬಗ್ಗೆ ಪ್ರಶಾಂತ್ ಮಾರ್ಚ್ 18 ರಂದು ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ದೂರು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರಿಗೆ ಇಮೇಲ್, ರಾಜಸ್ಥಾನದ ಜೋಧಪುರದಿಂದ ಬಂದಿದ್ದು ತಿಳಿದು ರಾಜಸ್ಥಾನಕ್ಕೆ ತೆರಳಿ ಅಲ್ಲಿನ ಸ್ಥಳೀಯ ಪೊಲೀಸರ ನೆರವಿನೊಂದಿಗೆ ವ್ಯಕ್ತಿಯೊರ್ವನನ್ನು ಬಂಧಿಸಿದ್ದಾರೆ.

    Demo

    ಸಲ್ಮಾನ್ ಖಾನ್ ಗೆ ಬೆದರಿಕೆ ಇಮೇಲ್ ಕಳುಹಿಸಿದ ಪ್ರಕರಣ ಸಂಬಂಧ 21 ವರ್ಷದ ಧಕದ್​ರಾಮ್ ಬಿಷ್ಣೋಯಿ ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈತ ರಾಜಸ್ಥಾನದ ಜೋದ್​ಪುರ್ ಬಳಿಯ ಸಿಯೋಗಿ ಕಿ ಧಾನಿ ಎಂಬಲ್ಲಿನ ನಿವಾಸಿವಾಗಿದ್ದು, ಈತನಿಗೂ ಸಲ್ಮಾನ್ ಖಾನ್ ಹಿಂದೆ ಬಿದ್ದಿರುವ ಬಿಷ್ಣೋಯಿ ಹಾಗೂ ಬ್ರಾರ್ ಗ್ಯಾಂಗ್​ಗೂ ಸಂಬಂಧವಿದೆ ಎನ್ನಲಾಗುತ್ತಿದೆ.

    ಬಂಧಿತನಾಗಿರುವ ಧಕದ್​ರಾಮ್ ಬಿಷ್ಣೋಯಿ ಬಳಿ ಶಸ್ತ್ರಾಸ್ತ್ರಗಳು ಸಹ ಪತ್ತೆಯಾಗಿದ್ದು, ಕೊಲೆ ಬೆದರಿಕೆ ಜೊತೆಗೆ ಅಕ್ರಮ ಶಸ್ತ್ರಾಸ್ತ್ರ ಪ್ರಕರಣವನ್ನು ಸಹ ಆತನ ಮೇಲೆ ದಾಖಲಿಸಲಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಮುಂಬೈಗೆ ಕರೆತರಲಾಗಿದ್ದು, ಆತ ಇಮೇಲ್ ಕಳಿಸಿದ್ದು ಏಕೆ? ಯಾರ ಸೂಚನೆ ಮೇರೆಗೆ ಇ-ಮೇಲ್ ಕಳಿಸಿದ್ದ. ಸಲ್ಮಾನ್ ಖಾನ್ ಅನ್ನು ಕೊಲ್ಲಲು ಯತ್ನಿಸಿದ್ದನೆ ಎಂದು ವಿಚಾರಣೆ ನಡೆಸಲಾಗುತ್ತಿದೆ.

    Share. Facebook Twitter LinkedIn Email WhatsApp

    Related Posts

    ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಕಲ್ಯಾಣ: ಮದುವೆಯ ಆಮಂತ್ರಣ ಪತ್ರಿಕೆ ವೈರಲ್

    May 30, 2023

    ಬಾಯ್‌ಫ್ರೆಂಡ್ ಖಾಸಗಿ ಫೋಟೋ ಹಂಚಿಕೊಂಡ ನಟಿ ಮಲೈಕಾ

    May 30, 2023

    ಶಿವರಾಜ್ ಕುಮಾರ್ ಸಿನಿಮಾದಲ್ಲಿ ಬಾಲಿವುಡ್ ನಟ ರಾಹುಲ್ ಬೋಸ್ ನಟನೆ

    May 30, 2023

    ತಂದೆಯ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಶ್ ವಿಶೇಷ ಗಿಫ್ಟ್: ಭಾವಿ ಪತ್ನಿ ಜೊತೆಗಿನ ವಿಡಿಯೋ ವೈರಲ್

    May 30, 2023

    ರಾಜಸ್ಥಾನದಲ್ಲಿ ಹಸೆಮಣೆ ಏರಲಿದ್ದಾರೆ ನಟಿ ಪರಿಣಿತಿ- ರಾಘವ್ ಚಡ್ಡಾ

    May 29, 2023

    ತಾತನ ಆರೋಗ್ಯ ಸ್ಥಿತಿ ಗಂಭೀರ: ವಿದೇಶ ಪ್ರವಾಸ ರದ್ದು ಮಾಡಿದ ಆಲಿಯಾ ಭಟ್

    May 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.