ಯಾದಗಿರಿ : ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಮಾಪಣ್ಣ(52) ಕೊಲೆಯಾದ ದುರ್ದೈವಿಯಾಗಿದ್ದು, ಭಾನುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್ ಮೇಲೆ ಶಹಾಪುರಕ್ಕೆ ಬಂದಿದ್ದ ಮಾಪ್ಪಣ್ಣ, ಈ ವೇಳೆ ಶಹಾಪುರದಿಂದ ಸ್ವಗ್ರಾಮ ಮದ್ದರಕಿಗೆ ತೆರಳುವಾಗ ಮಾರ್ಗ ಮಧ್ಯೆ ಸಾದ್ಯಾಪುರ ಬಳಿ ಬೈಕ್ ಅಡ್ಡಗಟ್ಟಿರುವ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಹಾಪುರ ಆಸ್ಪತ್ರೆಗೆ ರವಾನಿಸಲಾಗಿದೆ.
ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವು ; 25ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಭೀಮರಾಯನಗುಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.