ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಮೆಜೆಸ್ಟಿಕ್ ನಿಂದ ಮಲ್ಲೇಶ್ವರಂ ಕಡೆ ಹೋಗೋ ರಸ್ತೆಯಲ್ಲಿ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ ಕೂದಲೇಳೆ ಅಂತರದಲ್ಲಿ ಪಾರಾಗಿದ್ದಾನೆ.
ಸುಮಾರು ಇಪ್ಪತೈದು ಅಡಿ ಯಿಂದ ಮೂವತ್ತು ಅಡಿ ಎತ್ತರದ ಸೇತುವೆ ಮೇಲಿಂದ ಜಿಗಿದಿದ್ದಾನೆ. ರೈಲಿಂದ ಕೆಳಗೆ ಬಿದ್ದ ರಭಸಕ್ಕೆ ಸೊಂಟ ಮತ್ತು ಬಲಭಾಗದ ಕಾಲಿಗೆ ತೀವ್ರಗಾಯಗಳಾಗಿದ್ದು,
ಕುಡಿದ ಅಮಲಿನಲ್ಲಿ ರೈಲಿನಿಂದ ಕೆಳಗೆ ಜಿಗಿದಿರೋ ಶಂಕೆಯಾಗಿದೆ. ಸದ್ಯ ಸ್ಥಳಕ್ಕೆ ಧಾವಿಸಿರುವ ಪೊಲೀಸರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿಯ ಹೆಸರು, ವಿಳಾಸ ಪತ್ತೆ ಹಚ್ಚುತ್ತಿದ್ದಾರೆ. ಶೇಷಾದ್ರಿಪುಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.