ದಾವಣಗೆರೆ: ಮಂಗನ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಹೊನ್ನಾಳಿ ತಾಲೂಕಿನ ಅರಕೆರೆ ಎಕೆ ಕಾಲೋನಿಯಲ್ಲಿ ನಡೆದಿದೆ. ಗುತ್ಯಪ್ಪ ಮಂಗನ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಮೃತ ಗುತ್ಯಪ್ಪನ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ಭಾಗದಲ್ಲಿ ಕರಡಿ, ಚಿರತೆ, ಮಂಗಗಳ ಕಾಟ ಹೆಚ್ಚಾಗಿದೆ ಎಂದು ಗ್ರಾಮಸ್ಥರು ರೇಣುಕಾಚಾರ್ಯ ಬಳಿ ಹೇಳಿಕೊಂಡರು. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ರೇಣುಕಾಚಾರ್ಯ ಚರ್ಚಿಸಿದರು.