ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರ ಮನೆಯಲ್ಲಿ ಇಂದು ಸಭೆ ನಡೆಸಲಾಯಿತು.
ನಗರದ ಪದ್ಮಾಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದ ಹತ್ತು ಹಲವು ವಿಷಯಗಳ ಬಗ್ಗೆ ವಿಸ್ತೃತ ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮಾಜಿ ಪ್ರಧಾನಿಗಳು ಮಹತ್ವದ ಸಲಹೆ, ಸೂಚನೆಗಳನ್ನು ನೀಡಿದರು.
ಮಾಜಿ ಸಚಿವರು ಮತ್ತು ಜೆ.ಡಿ.ಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ ದೇವೇಗೌಡ ರವರು ,ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ರವರು, ಶ್ರೀ ಡಿ.ಸಿ.ತಮ್ಮಣ್ಣರವರು, ಶಾಸಕರಾದ ಶ್ರೀ ಎಚ್. ಟಿ ಮಂಜುನಾಥ್, ಮಾಜಿ ಶಾಸಕರು ಹಾಗೂ ನಮ್ಮ ಪಕ್ಷದ ಮಾಜಿ ಶಾಸಕರಾದ ಶ್ರೀ ರವೀಂದ್ರ ಶ್ರೀಕಂಠಯ್ಯ, ಶ್ರೀ ಸುರೇಶ್ ಗೌಡರು, ಡಾ.ಕೆ.ಅನ್ನದಾನಿ,ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ ಶ್ರೀಕಂಠೇಗೌಡ ರವರು, ಪಕ್ಷದ ಜಿಲ್ಲಾಧ್ಯಕ್ಷ ಶ್ರೀ ರಮೇಶ್ ಅವರು ಸಭೆಯಲ್ಲಿ ಭಾಗಿಯಾಗಿದ್ದರು.