ಮಂಡ್ಯ: ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗಳ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.73.59 ಫಲಿತಾಂಶ ಬಂದಿದೆ. ಆದ್ರೆ ಕಳೆದ ಸಾಲಿನಲ್ಲಿ 2ನೇ ಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆ ಈ ಬಾರಿ 19ನೇ ಸ್ಥಾನಕ್ಕೆ ಕುಸಿದಿದೆ. ಈ ಬಾರಿ ಜಿಲ್ಲೆಯಲ್ಲಿ 20,529 ಪರೀಕ್ಷೆ ಬರೆದಿದ್ದರು. ಈ ಪೈಕಿ 15,108 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಮಂಡ್ಯ ಜಿಲ್ಲೆಗೆ ಶೇ.73.59 ಫಲಿತಾಂಶ ಬಂದಿದೆ. ಈ ವರ್ಷದಲ್ಲಿ ಮಂಡ್ಯ ಜಿಲ್ಲೆಗೆ ಬಂದ ಅತಿ ಕಳಪೆ ಫಲಿತಾಂಶವಾಗಿದ್ದು, ಕಳೆದ ಸಾಲಿನಲ್ಲಿ ಶೇ.96.04 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿತ್ತು. 19,965 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇವರಲ್ಲಿ 19,133 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಕಳೆದ ಬಾರಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಮಂಡ್ಯ ಜಿಲ್ಲೆ ಈ ಬಾರಿ 19ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬರೋಬ್ಬರಿ 19 ಸ್ಥಾನ ಕುಸಿತ ಕಂಡಿದೆ.