ನವದೆಹಲಿ: ಮಂಡ್ಯ ಲೋಕಸಭಾ ಚುನಾವಣೆ ರಂಗೇರಿದ್ದು ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Happy Chocolate Day 2024: ʼʼಚಾಕಲೇಟ್ ಡೇʼʼ ಗೆ ನಿಮ್ಮ ಸಂಗಾತಿಗೆ ಕಳುಹಿಸಿ ಪ್ರೇಮಭರಿತ ಮೆಸೇಜ್ʼಗಳು..!
ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಇನ್ನೂ ಫೈನಲ್ ಆಗಿಲ್ಲ.
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @PMOIndia ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. @narendramodi ಶ್ರೀ ನರೇಂದ್ರ ಮೋದಿರವರು ವಿಶ್ವದ ಮಹಾನ್… pic.twitter.com/60y9sX7H53
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) February 9, 2024
ಈ ಹಿಂದೆ ಸುಮಲತಾ ಅಂಬರೀಶ್ ಅವರು ನಾನು ಈ ಬಾರಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದರು. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದರು.