ಬೆಂಗಳೂರು: ಸಕ್ಕರೆ ನಾಡು ಮಂಡ್ಯ (Mandya) ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡ್ತಾರೆ ಎಂವ ಕೌತುಕ ರಾಜಕೀಯ ವಲಯದಲ್ಲಿ ಮೂಡಿತ್ತು. ಇಂದು (ಮಂಗಳವಾರ) ಈ ಎಲ್ಲಾ ಕುತೂಹಲಕ್ಕೂ ತೆರೆ ಬೀಳಲಿದೆ.
MP Election: ಬೆಂಗಳೂರಿನಲ್ಲಿ ಮತದಾನದ ಅರಿವು ಮೂಡಿಸಿ – ತುಷಾರ್ ಗಿರಿನಾಥ್ ಸೂಚನೆ!
ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಒತ್ತಡ ಏರಿದಾಗಲೇ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧೆ ಮಾಡುವ ಮನಸ್ಸು ಮಾಡಿದ್ರು. ಆದರೆ ರಾಮನಗರ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರು ಮಂಡ್ಯ ಸ್ಪರ್ಧೆ ಬೇಡಾ. ರಾಮನಗರದಲ್ಲಿಯೇ ಕುಮಾರಸ್ವಾಮಿ ಇರಬೇಕು. ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಹೇಳಿದ್ರು. ಹೀಗಾಗಿ ಕುಮಾರಸ್ವಾಮಿ ಅವರು ಮಂಡ್ಯ ಸ್ಪರ್ಧೆ ವಿಚಾರದಲ್ಲಿ ಸ್ವಲ್ಪ ಗೊಂದಲದಲ್ಲಿ ಇದ್ದರು.
ನಿನ್ನೆ ರಾಮನಗರ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನ ತಮ್ಮ ನಿವಾಸಕ್ಕೆ ಕರೆದು ಕುಮಾರಸ್ವಾಮಿ ಮಾತನಾಡಿದ್ದಾರೆ. ಈ ವೇಳೆ ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಅನಿವಾರ್ಯತೆ ಬಗ್ಗೆ ಕಾರ್ಯಕರ್ತರಿಗೆ ಹೆಚ್ಡಿಕೆ ತಿಳಿಸಿದ್ದಾರೆ. ಬಳಿಕ ರಾಮನಗರ ಜಿಲ್ಲೆಯ ಜನರು ಮಂಡ್ಯದಲ್ಲಿ ಕುಮಾರಸ್ವಾಮಿ ಅವರ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಮಂಡ್ಯದಿಂದ ಕುಮಾರಸ್ವಾಮಿ ಅವರ ಸ್ಪರ್ಧೆ ಪಕ್ಕ ಆಗಿದೆ