ಬೆಂಗಳೂರು: ಸಕ್ಕರೆ ನಾಡು ಮಂಡ್ಯ (Mandya) ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡ್ತಾರೆ ಎಂವ ಕೌತುಕ ರಾಜಕೀಯ ವಲಯದಲ್ಲಿ ಮೂಡಿತ್ತು. ಇಂದು (ಮಂಗಳವಾರ) ಈ ಎಲ್ಲಾ ಕುತೂಹಲಕ್ಕೂ ತೆರೆ ಬೀಳಲಿದೆ.
ಹೌದು.. ಮಾಜಿ ಸಿಎಂ ಕುಮಾರಸ್ವಾಮಿಯವರ ಜೆಪಿ ನಗರದಲ್ಲಿರುವ ನಿವಾಸದಲ್ಲಿ ನಡೆಯುತ್ತಿರುವ ಸಭೆಯಾಗಿದ್ದು ಸಭೆಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಮಾಜಿ ಶಾಸಕ ವೆಂಕಟರಮಣ ನಾಡಗೌಡ, ಎಂಎಲ್ ಸಿ ಶರವಣ, ಶಾಸಕ ಸಮೃದ್ದಿ ಮಂಜುನಾಥ್ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಭಾಗಿಯಾಗಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ತಂಗಡಗಿ ಹೇಳಿಕೆ: ಸಚಿವರ ವಿರುದ್ಧ ಬಿಜೆಪಿ ಕಿಡಿ!
ಅದೇ ರೀತಿ ಇಂದು ಕೋಲಾರ ಜೆಡಿಎಸ್ ಅಭ್ಯರ್ಥಿ ಘೋಷಣೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ ಕೋಲಾರ ಸಂಸದ ಮುನಿಸ್ವಾಮಿ ಕೋಲಾರದಲ್ಲಿ ಯಾರನ್ನು ಅಭ್ಯರ್ಥಿಯಾಗಿ ಮಾಡಿದ್ರೆ ಗೆಲುವು ಸಾಧಿಸಬಹುದು ಕೋಲಾರ ಅಭ್ಯರ್ಥಿ ಕುರಿತು ಚರ್ಚೆ ನಡೆಯುತ್ತಿದೆ.