ಮಂಡ್ಯ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶಿಖಾವತ್ ರನ್ನ ಮಂಡ್ಯ ಸಂಸದೆ ಸುಮಲತಾ ಭೇಟಿ ಮಾಡಿದ್ದಾರೆ. ಕರ್ನಾಟಕದಲ್ಲಿ ಮತ್ತು ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಸುಮಲತಾ ಹೇಳಿದ್ದಾರೆ.
ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು, ಮುಂದಿನ ವಾರದೊಳಗೆ ರಾಜ್ಯದಲ್ಲಿ ಬರ ಅಧ್ಯಯನ ನಡೆಸಲು ಕೇಂದ್ರದ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಿ ಬರಪೀಡಿತ ಪ್ರದೇಶಗಳಿಗೆ ಕಳುಹಿಸುವುದಾಗಿ ಆಶ್ವಾಸನೆ ನೀಡಿದರು.
