ಮಂಡ್ಯ:- ಇಲ್ಲಿನ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ಹೌಸ್ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯ ಲೋಕಾಯುಕ್ತ ಎಸ್ಪಿ ಸಜೀತ್ ನೇತೃತ್ವದಲ್ಲಿ ದಾಳಿ ನಡೆದಿದೆ