ಬೆಂಗಳೂರು: ಹೆಚ್ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿಯವರೇ ಕಣಕ್ಕೆ ಇಳಿಯುತ್ತಾರೆ. ಸಂಜೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಇಂದು ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ಇಂದು ಸಂಜೆ ಮೈತ್ರಿ ಅಭ್ಯರ್ಥಿಗಳು ಹೆಸರನ್ನು3 ಕ್ಷೇತ್ರಗಳಿಗೆ ಫೈನಲ್ ಮಾಡಲಾಗಿದೆ. ಅಧಿಕೃತವಾಗಿ ಘೋಷಣೆ ಮಾತ್ರ ಬಾಕಿ ಇದೆ.
DKS Bomb: ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಸಿಎಂ ಬದಲಾವಣೆ ಕೂಗು: ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
ಈ ಮೊದಲು ಮಂಡ್ಯದಲ್ಲಿ ಪುಟ್ಟರಾಜು ಅವರನ್ನು ಕಣಕ್ಕಿಳಿಸಬೇಕೆಂದು ತೀರ್ಮಾನ ಮಾಡಿದ್ವಿ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಸಹ ಸ್ಪರ್ಧೆ ಮಾಡಲ್ಲ ಎಂದಿದ್ದಾನೆ. ಇನ್ನು ಜಿಲ್ಲೆಯ ಕಾರ್ಯಕರ್ತರು ನನ್ನನ್ನು ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇಂದು (ಮಾರ್ಚ್ 26) ಸಂಜೆ ಮಂಡ್ಯ ಜಿಲ್ಲೆಯ ಮುಖಂಡರ ಸಭೆ ನಡೆಸಿ ಅಂತಿಮ ತೀರ್ಮಾನ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.