ಮಂಗಳೂರು:- ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ಮಧ್ಯರಾತ್ರಿ ವೃದ್ಧ ದಂಪತಿಗಳಿದ್ದ ಮನೆಯ ಕಿಟಕಿ ಸರಳು ಮುರಿದು ನುಗ್ಗಿ ಲೂಟಿ ಮಾಡಿದ್ದ ಚಡ್ಡಿ ಗ್ಯಾಂಗ್ ಅನ್ನು ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
Gautam Gambhir: ಅಧಿಕೃತವಾಗಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ!
ವಿಕ್ಟರ್ ಮೆಂಡೋನ್ಸಾ(71) ಹಾಗೂ ಪ್ಯಾಟ್ರಿಷಾ ಮೆಂಡೋನ್ಸಾ(60) ಅವರ ಮೇಲೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಇದೀಗ ಆರೋಪಿಗಳಾದ ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) ಎಂಬ ನಾಲ್ವರನ್ನು ಅರೆಸ್ಟ್ ಮಾಡಿದ್ದು, ಇವರು ಮಧ್ಯಪ್ರದೇಶದವರು ಎಂಬುದು ತಿಳಿದು ಬಂದಿದೆ.
ಇನ್ನು ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ್ದ ಚಡ್ಡಿ ಗ್ಯಾಂಗ್, ಬೆಡ್ ರೂಂ ನ ಕಿಟಕಿಯ ಸರಳನ್ನು ಕಟ್ ಮಾಡಿ ಮನೆ ಒಳಗೆ ನುಗ್ಗಿತ್ತು. ಈ ವೇಳೆ 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್ಗಳು ಹಾಗೂ 3 ಸಾವರ ನಗದು ಹಣವನ್ನು ಸುಲಿಗೆ ಮಾಡಿದ್ದರು. ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು. ಅದರಲ್ಲಿ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಈ ಕುರಿತು ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ ವಿಚಾರಿಸಿದಾಗ ಬಸ್ ಹಾಸನ ಕಡೆ ತೆರಳುತ್ತಿರುವುದು ಪತ್ತೆಯಾಗಿದೆ. ಈ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿ, ಸಕಲೇಶಪುರ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ಜನರನ್ನು ವಶಕ್ಕೆ ಪಡೆದು, ಬಂಧಿತರಿಂದ 12 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.