ಚಿಕ್ಕಮಗಳೂರು:- ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ ಪಟ್ಟಿದೆ.
IPL 2025: RCB ಕ್ಯಾಪ್ಟನ್ ಆಗಲು ಕೊಹ್ಲಿ ನಿರಾಕರಿಸಿದ್ರಾ!? ಪ್ರಾಂಚೈಸಿ ಲೆಕ್ಕಾಚಾರ ಏನಿತ್ತು?
ಕೊಪ್ಪ ಮತ್ತು ಎನ್ಆರ್ ಪುರ ತಾಲೂಕಿನ ನಾಲ್ವರಲ್ಲಿ ಕೆಎಫ್ಡಿ ದೃಢಪಟ್ಟಿದೆ. ಒಟ್ಟು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.
ಮಂಗನ ಕಾಯಿಲೆ ಪತ್ತೆಯಾದ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿದ್ದು, ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಸದ್ಯ ಕಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಮಳೆಗಾಲ ಕಳೆದು ಇನ್ನೇನು ಚಳಿಗಾಲ ಮುಗಿದು ಬೇಸಿಗೆ ಆರಂಭವಾಗಿದೆ. ಬಿಸಿಲ ಬೇಗೆ ಹೆಚ್ಚಾಗುತ್ತಿದ್ದಂತೆ ಕಾಫಿನಾಡಿಗೆ ಮಹಾಮಾರಿ KFD ಕಾಯಿಲೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಇದೀಗ ಈ ಮಾರಣಾಂತಿಕ ರೋಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.