ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಟೀಮ್ ಇಂಡಿಯಾವು ಶ್ರದ್ಧಾಂಜಲಿ ಸಲ್ಲಿಸಿದೆ.
ಮನಮೋಹನ್ ಸಿಂಗ್ ನಿಧನ: ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ಆಸೀಸ್ ಪಡೆಯನ್ನು ಬೇಗನೇ ಆಲೌಟ್ ಮಾಡುವ ಇರಾದೆಯೊಂದಿಗೆ ಕಣಕ್ಕಿಳಿದಿರುವ ಟೀಂ ಇಂಡಿಯಾ ಅಗಲಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಕಪ್ಪು ಪಟ್ಟಿ ಧರಿಸಿ ಅಖಾಡಕ್ಕಿಳಿದಿದೆ.
ಇನ್ನೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ಅವರನ್ನು ಗುರುವಾರ ರಾತ್ರಿ ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ. ಅದೇ ರಾತ್ರಿ 9:51ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಅವರ ನಿಧನದಿಂದ ನಾಡಿನಾದ್ಯಂತ ಶೋಕ ಮಡುಗಟ್ಟಿದ್ದು, ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.
ಇನ್ನು ಅಗಲಿದ ಚೇತನಕ್ಕೆ ಟೀಂ ಇಂಡಿಯಾದ ಹಲವು ಮಾಜಿ ಆಟಗಾರರು ಸಂತಾಪ ಸೂಚಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ವಿರೇಂದ್ರ ಸೆಹ್ವಾಗ್, ‘ನಮ್ಮ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.