ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಯಿಂದ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಆರೋಪಿ ಪರ ವಕೀಲ ಕೆಎಸ್ಎನ್ ರಾಜೇಶ್ ಎಂಬುವವರಿಂದ ಅರ್ಜಿ ಸಲ್ಲಿಸಲಾಗಿದೆ. ಡಿಸೆಂಬರ್ 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿರುವ ಕೋರ್ಟ್, ಸದ್ಯ ಆರೋಪಿ ಪ್ರವೀಣ್ ಚೌಗುಲೆ ಪರಪ್ಪನ ಅಗ್ರಹಾರದಲ್ಲಿದ್ದಾರೆ.
DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?
ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಇದೇ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ದಾರುಣ ಘಟನೆ ನಡೆದಿತ್ತು. ಆರೋಪಿ ಪ್ರವೀಣ್ ಚೌಗುಲೆ ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.