ಬೆಂಗಳೂರು: ಈ ವರ್ಷದ ಅಂತ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಬೆಂಗಳೂರಿನಲ್ಲಿ ಗರಿಷ್ಠ 28.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಅದು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿತ್ತು.
ಇನ್ನೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.40 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹೇಳಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಸಹಜ ತಾಪಮಾನಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
