ಬಾಗಲಕೋಟೆ: ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಅವರು ಪಕ್ಷಕ್ಕೆ ಬಂದಮೇಲೆ ಸ್ಥಾನಮಾನ ಬಗ್ಗೆ ಚಿಂತನೆ ಮಾಡಬೇಕು. ನಮ್ಮ ಪಕ್ಷದವರ ಸಹಮತವನ್ನು ಪಡೆದುಕೊಂಡು ಚರ್ಚೆ ಮಾಡ್ತೀವಿ.
ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ
ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು. ಆ ನಿಟ್ಟಿನಲ್ಲಿ ಆಯಾ ಕ್ಷೇತ್ರದ ನಮ್ಮ ಮುಖಂಡರ ಜೊತೆ ಚರ್ಚಿಸುತ್ತೇವೆ. ಸ್ವಇಚ್ಛೆಯಿಂದ ಬರುವವರನ್ನು ಗೌರವದಿಂದ ಬರಮಾಡಿಕೊಳ್ಳುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದರು.