ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಭಾರೀ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಹತರಾಗಿದ್ದಾರೆ. ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಕುರ್ನವಳ್ಳಿ ಮತ್ತು ಪೆಸರಪಾಡು ಅರಣ್ಯದಲ್ಲಿ ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಘರ್ಷಣೆ ನಡೆಯಿತು.
ರಾತ್ರಿಯವರೆಗೂ ನಡೆದ ಗುಂಡಿನ ಚಕಮಕಿಯಲ್ಲಿ ಆರು ಮಾವೋವಾದಿಗಳು ಹತರಾಗಿದ್ದಾರೆ. ಮಾವೋವಾದಿಗಳ ಸಾವನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮೃತರ ವಿವರವೂ ತಿಳಿಯಬೇಕಿದೆ.
