ಬೆಂಗಳೂರು:- ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಮುಷ್ಕರ ಬಹುತೇಕ ಫಿಕ್ಸ್ ಆಗಿದ್ದು, ರಾಜ್ಯ ಸರ್ಕಾರಕ್ಕೆ ಮಾರ್ಚ್ 22ರ ಗಡುವು ನೀಡಲಾಗಿದೆ.
ಮಾರ್ಚ್ 22 ರೊಳಗೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನವನ್ನು ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರಿಗೆ ನೀಡಬೇಕು. ಇಲ್ಲವಾದರೆ ಮಾರ್ಚ್ 25 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದಿಂದ ಸಭೆ ಕರೆದು ಆ ಸಭೆಯಲ್ಲಿ ನಾಲ್ಕು ನಿಗಮದ ಸಾರಿಗೆ ಮುಷ್ಕರದ ದಿನಾಂಕವನ್ನು ಘೋಷಣೆ ಮಾಡುತ್ತೇವೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರು ಮಾಹಿತಿ ನೀಡಿದ್ದಾರೆ.
ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳೇನು?
ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡಬೇಕು (7 ನೇ ವೇತನ ಆಯೋಗ ಜಾರಿಯಾಗಬೇಕು).
38 ತಿಂಗಳ ವೇತನ ಹಿಂಬಾಕಿ ನೀಡಬೇಕು.
ಕಾರ್ಮಿಕ ಸಂಘಟನೆಗಳ ಚುನಾವಣೆ ಮಾಡಬೇಕು.
2021 ರ ವೇಳೆಯಲ್ಲಿ ಮುಷ್ಕರದ ವಜಾಗೊಂಡ ನೌಕರರ ಸಮಸ್ಯೆಯನ್ನು ಬಗೆಹರಿಸಬೇಕು.
ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಬುಧವಾರವಷ್ಟೇ ಸಭೆ ನಡೆಸಿ, ನಾಲ್ಕು ಬೇಡಿಕೆಗಳನ್ನು ಈಡೇರಿಸಲು 22 ರ ವರೆಗೆ ಸರ್ಕಾರಕ್ಕೆ ಗಡುವು ನೀಡಿದೆ. ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಅಂದರೆ 25 ರಂದು ಸಭೆ ಕರೆದು ಖಾಸಗಿ ಸಾರಿಗೆ ಮುಷ್ಕರಕ್ಕೆ ಕರೆ ನೀಡುವ ಎಚ್ಚರಿಕೆ ನೀಡಿದೆ.