ಬೆಂಗಳೂರು:- ಸರ್ಕಾರಿ ಬಸ್ ಗಳಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನೆರೆಯ ಕೇರಳ, ತಮಿಳುನಾಡಿನಲ್ಲಿ ಕೋವಿಡ್ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿಯೂ ಅದಕ್ಕಾಗಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಸರ್ಕಾರದ ಮಾರ್ಗಸೂಚಿಯಂತೆ ಬಸ್ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದರು.
ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್ಆರ್ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ