ರಾಯಚೂರು : ದೇವದುರ್ಗ ತಾಲೂಕಿನ ಗಬ್ಬೂರಿನ ಐತಿಹಾಸಿಕ ಬೂದಿ ಬಸವೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಸತತ 20 ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದು , ಇದುವರೆಗೆ 2600 ಜೋಡಿಗಳ ಮದುವೆಯಾಗಿದೆ. ಈ ಬಾರಿ 175 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ 136 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿವೆ.
ಇದೇ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿಗಳಾದ ಬೂದಿಬಸವ ಶಿವಾಚಾರ್ಯ ಸ್ವಾಮಿಗಳ ತುಲಾಭಾರ ನೆರವೇರಿಸಲಾಯಿತು ಇದಕ್ಕೂ ಮುನ್ನ ವಟುಗಳಿಗೆ ಅಯ್ಯಾಚಾರ ದೀಕ್ಷೆ ನೀಡಲಾಯಿತು. ಫೆಬ್ರವರಿ 5 ರಿಂದ 13 ರ ವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ. ಫೆಬ್ರವರಿ 9 ರಂದು ಮಠದ ಆವರಣದಲ್ಲಿ ಮಹಾರಥೋತ್ಸವ ನಡೆಯಲಿದೆ. ಮಹಾರಥೋತ್ಸವಕ್ಕೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.